ಒಟ್ಟು 3 ಕಡೆಗಳಲ್ಲಿ , 1 ವಚನಕಾರರು , 3 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ತಿರುಗಿಸಲಿ ವಿಧಿರಾಯನಿಚ್ಛೆಯಿಂ ಯಂತ್ರವನು |ಚರಿಕೆ ತಾರಾಗ್ರಹಗಳಿಷ್ಟವೋದಂತೆ ||ಪರಿಹಾಸದಿಂ ಕರ್ಮ ದೈವ ಕೇಕೆಗಳಿಡಲಿ |ಸ್ಥಿರಚಿತ್ತ ನಿನಗಿರಲಿ - ಮಂಕುತಿಮ್ಮ ||
ಮರಣಶಯ್ಯೆಯದೆಂದು ತಿಳಿದೊಡಂ ರೋಗಿಯನು |ಹರಣಮಿರುವನ್ನೆಗಂ ಪರಿಚರಿಸುವಂತೆ ||ಸ್ಥಿರವಲ್ಲವೀ ಲೋಕವಾದೊಡಮದುಳ್ಳನಕ |ಚರಿಸು ನೀನಾಳಾಗಿ - ಮಂಕುತಿಮ್ಮ ||
ಸ್ಥಿರ ಹಿಮಾಚಲ ಬೊಮ್ಮ; ಚರ ಜಾಹ್ನವಿಯೆ ಮಾಯೆ |ಪರಸತ್ತ್ವಘನದ ವಿದ್ರವರೂಪ ವಿಶ್ವ ||ಪರಮಾರ್ಥಕೊಂದಕ್ಷಿ ವೆವಹಾರಕಿನ್ನೊಂದು |ಎರಡುಮೊಂದಾಂತರ್ಯ - ಮಂಕುತಿಮ್ಮ ||