ಒಟ್ಟು 9 ಕಡೆಗಳಲ್ಲಿ , 1 ವಚನಕಾರರು , 9 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಆವ ಕಡೆ ಹಾರುವುದೊ! ಆವ ಕಡೆ ತಿರುಗುವುದೊ! |ಆವಾಗಳಾವಕಡೆಗೆರಗುವುದೊ ಹಕ್ಕಿ! ||ನಾವುಮಂತೆಯೆ ಸೃಷ್ಟಿಕೃತ್ರಿಮದ ಕೈಗೊಂಬೆ |ಜೀವಮಾರ್ಗವನೂಹ್ಯ - ಮಂಕುತಿಮ್ಮ ||
ಏನೊ ಕಣ್ಣನು ಪಿಡಿವುದೇನೊ ದಿಗಿಲಾಗಿಪುದು |ಏನನೋ ನೆನೆದು ಸರ್ರೆಂದು ಹಾರುವುದು ||ಬಾನೊಳಾಡುವ ಹಕ್ಕಿಗಿದುವೆ ನಿತ್ಯಾನುಭವ |ನೀನದನು ಮೀರಿಹೆಯ? - ಮಂಕುತಿಮ್ಮ ||
ಕಾಡುಹಕ್ಕಿ ಹುಳಕ್ಕೆ ವರ್ಣಚಿತ್ರಗಳೇಕೆ? |ನೋಡುವರ ಕಣ್ಣೊಲವ ಬೇಡುವಳೆ ಸೃಷ್ಟಿ? ||ಮಾಡುವಾ ಮಾಟಗಳನಾದನಿತು ಬೆಳಗಿಪುದು |ರೂಢಿಯಾ ಪ್ರಕೃತಿಯದು - ಮಂಕುತಿಮ್ಮ ||
ತಲೆಯೊಳಗೆ ನೆರೆದಿಹುವು ನೂರಾರು ಹಕ್ಕಿಗಳು |ಗಿಳಿ ಗೂಗೆ ಕಾಗೆ ಕೋಗಿಲೆ ಹದ್ದು ನವಿಲು ||ಕಿಲಕಿಲನೆ ಗೊರಗೊರನೆ ಕಿರಿಚಿ ಕೂಗುತ್ತಿಹುವು |ನೆಲೆಯೆಲ್ಲಿ ನಿದ್ದೆಗೆಲೊ? - ಮಂಕುತಿಮ್ಮ ||
ದನ ಸಿಂಗ ಹುಲಿ ಹಕ್ಕಿ ಹಾವು ಮೀನ್ಗಳಿಗೆಲ್ಲ |ಇನಿಸುಣಿಸು; ಬೆದೆ; ಬೆದರು---ಅಷ್ಟೆ ಜೀವಿತವು ||ಮನುಜನೆಂತನಿತರಿಂ ತೃಪ್ತಿವಡೆವನವಂಗೆ |ಕ್ಷಣಕ್ಷಣವು ಹೊಸ ಹಸಿವು - ಮಂಕುತಿಮ್ಮ ||
ನಟಿಪುದೊಮ್ಮೊಮ್ಮೆ ಮರುಕವ ದೈವ ಮನುಜರಲಿ |ಕಟುಕನಿನಿಸಕ್ಕಿಯನು ಹಕ್ಕಿಗೆರಚುವವೋಲ್ ||ತುಟಿ ಸುಟ್ಟು ರಸನೆಗೆಟುಕದ ಕೀರು ದೈವಕೃಪೆ |ತಟವಟವೊ ಸೃಷ್ಟಿದಯೆ - ಮಂಕುತಿಮ್ಮ ||
ಪುಲಿ ಸಿಂಗದುಚ್ಛ್ವಾಸ; ಹಸು ಹುಲ್ಲೆ ಹಯದುಸಿರು |ಹುಳು ಹಾವಿಲಿಯ ಸುಯ್ಲು; ಹಕ್ಕಿ ಹದ್ದುಯ್ಲು ||ಕಲೆತಿರ್ಪುವೀಯೆಲ್ಲ ನಾಮುಸಿರ್ವೆಲರಿನಲಿ |ಕಲಬೆರಕೆ ಜಗದುಸಿರು - ಮಂಕುತಿಮ್ಮ ||
ಪೊಡೆಯುಣಿಸ ಮಿಗಹಕ್ಕಿಹುಳುಗಳಂದದಿ ನರನ |ತಡಕುವನು; ತನ್ನಾತ್ಮದುಣಿಸ ಮರೆಯುವನು ||ಒಡಲಿನಬ್ಬರವೇನು? ಆತುಮದ ನಾಣ್ಚೇನು? |ಪೊಡವಿಗಿದೆ ದುಮ್ಮಾನ - ಮಂಕುತಿಮ್ಮ ||
ಹಕ್ಕಿ ಮುನ್ನರಿಯುವುದೆ ತನ್ನ ಪಯಣದ ತೆರನ? |ಇಕ್ಕುವರದಾರದನು ಕರೆದು ತಿರುಪೆಯನು? |ರೆಕ್ಕೆ ಪೋದಂತಲೆದು; ಸಿಕ್ಕಿದುದನುಣ್ಣುವುದು |ತಕ್ಕುದಾ ವ್ರತ ನಿನಗೆ - ಮಂಕುತಿಮ್ಮ ||