ಒಟ್ಟು 3 ಕಡೆಗಳಲ್ಲಿ , 1 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ತಲೆ ಕೊಡವ ತಳೆದಿರಲು; ಕೈ ಕತ್ತಿ ಪಿಡಿದಿರಲು |ಬಳುಕು ಹಗ್ಗದ ಮೇಲೆ ತಾನಡಿಯನಿಡುತ ||ಕೆಲ ಬಲಕೆ ಬೀಳದೆ ಮುನ್ನಡೆವ ಡೊಂಬನುಪಾಯ |ಕಲೆಯೆ ಜೀವನಯೋಗ - ಮಂಕುತಿಮ್ಮ ||
ಸುಟ್ಟಿ ಹಗ್ಗದ ಬೂದಿ ರೂಪಮಾತ್ರದಿ ಹಗ್ಗ |ಗಟ್ಟಿ ಜಗವಂತು ತತ್ತ್ವಜ್ಞಾನ ಸೋಕೆ ||ತೊಟ್ಟಿಹುದು ಲೋಕರೂಪವ; ತಾತ್ತ್ವಿಕನ ವೃತ್ತಿ |ಕಟ್ಟಿದವನಾತ್ಮವನು - ಮಂಕುತಿಮ್ಮ ||