ಒಟ್ಟು 6 ಕಡೆಗಳಲ್ಲಿ , 1 ವಚನಕಾರರು , 6 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಅದು ಒಳಿತು ಇದು ಕೆಟ್ಟುದೆಂಬ ಹಟ ನಿನಗೇಕೆ? |ಹೊದಿಸಿಹುದು ದೈವವೆಲ್ಲಕಮೊಂದು ತೆರೆಯ ||ಸೊದೆಯ ಸೌರಭ ನಂಜುಬಟ್ಟಲಲಿ ತೋರೀತು |ವಿಧಿಯ ಬಗೆಯೆಂತಿಹುದೊ! - ಮಂಕುತಿಮ್ಮ ||
ಎಣಿಕೆಯೊಳಿತಾದೊಡೆಯುಮೊಳಿತನಾಗಿಸದು ಹಟ |ಮಣಿಕನಕ ಸಂಕೋಲೆ ತನುವ ಬಂಧಿಸದೇಂ? ||ತನಯನಿರಿದಸಿ ನಿನ್ನ ಮೈಯ ಹುಣ್ಣಾಗಿಸದೆ? |ಮನ ಸರ್ವಸಮವಿರಲಿ - ಮಂಕುತಿಮ್ಮ ||
ತಿರಿದನ್ನವುಂಬಂಗೆ ಹುರುಡೇನು; ಹಟವೇನು |ತಿರುಪೆಯಿಡುವರು ಕುಪಿಸಿ ಬಿರುನುಡಿಯ ನುಡಿಯೆ ||ದುರದುರನೆ ನೋಡಿ ನೀನೆದುರುನುಡಿ ನುಡಿಯುವುದೆ? |ಗರುವವೇತಕೆ ನಿನಗೆ? - ಮಂಕುತಿಮ್ಮ ||
ಮನವನಾಳ್ವುದು ಹಟದ ಮಗುವನಾಳುವ ನಯದೆ |ಇನಿತನಿತು ಸವಿಯುಣಿಸು ಸವಿಕಥೆಗಳಿಂದೆ ||ಅನುಕೂಲಿಸದು ಬರಿಯ ಕೂಗು ಬಡಿತಗಳಿನದು |ಇನಿತಿತ್ತು ಮರಸಿನಿತ - ಮಂಕುತಿಮ್ಮ ||
ಸತ್ಯವಂತನನರಸಲೆನುತ ಪೇಟೆಗಳೊಳಗೆ |ಹಟ್ಟಹಗಲೊಳೆ ದೀವಿಗೆಯ ಹಿಡಿದು ನಡೆದು ||ಕೆಟ್ಟುದೀ ಜಗವೆಂದು ತೊಟ್ಟಿಯೊಳೆ ವಸಿಸಿದನು |ತಾತ್ತ್ವಿಕ ಡಯೋಜೆನಿಸ್ - ಮಂಕುತಿಮ್ಮ ||
ಹಟವಾದಕೆಡೆಯೆಲ್ಲಿ ಮನುಜಪ್ರಪಂಚದಲಿ? |ಸೆಟೆಯೆಷ್ಟೊ ದಿಟವೆಷ್ಟೊ ಬೆರೆತಿರುವುವಿಲ್ಲಿ ||ಪಟುವಾಗಿ ನಿಲಲಹುದೆ ಮಣಲೊಳೆಸಗಿದ ಗೋಡೆ? |ಕಟುತೆ ಸಲ್ಲದು ಜಗಕೆ - ಮಂಕುತಿಮ್ಮ ||