ಒಟ್ಟು 5 ಕಡೆಗಳಲ್ಲಿ , 1 ವಚನಕಾರರು , 5 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಇಂದು ಮದುವೆಯ ಹಬ್ಬ; ನಾಳೆ ವೈಕುಂಠ ತಿಥಿ |ಇಂದು ಮೃಷ್ಟಾನ್ನಸುಖ; ನಾಳೆ ಭಿಕ್ಷಾನ್ನ ||ಇಂದು ಬರಿಯುಪವಾಸ; ನಾಳೆ ಪಾರಣೆ---ಯಿಂತು |ಸಂದಿರುವುದನ್ನಋಣ - ಮಂಕುತಿಮ್ಮ ||
ಒಂದು ಕಡೆ ಚಿಗುರುತಲಿ; ಒಂದು ಕಡೆ ಬಾಡುತಲಿ |ಕಂದುತಿರೆ ಕೊಂಬೆ; ಮುಂಡದಲಿ ಹಬ್ಬುತಲಿ ||ಎಂದೆಂದುಮಶ್ವತ್ಥ ಹಳೆಹೊಸದು; ತಾನದಾ |ಸ್ಪಂದನವೊ ಬ್ರಹ್ಮನದು - ಮಂಕುತಿಮ್ಮ ||
ತೊಟ್ಟಿಲುಗಳೆಷ್ಟೊ ಮಸಣಗಳಷ್ಟು ಧರೆಯೊಳಗೆ |ತೊಟ್ಟಿಲಿಗೆ ಹಬ್ಬ ಮಸಣವು ತೇಗುತಿರಲು ||ಹುಟ್ಟಿದವರೆಲ್ಲ ಸಾಯದೆ ನಿಲ್ಲೆ; ಹೊಸತಾಗಿ |ಹುಟ್ಟುವರ್ಗೆಡೆಯೆಲ್ಲಿ? - ಮಂಕುತಿಮ್ಮ ||
ಧರಣಿಗೋಳವು ಮೂಸೆ; ಜೀವಗಳನದರೊಳಗೆ |ಪರಿಶುದ್ಧಿಗೊಳಿಸುವುದು ಸಂಸಾರತಾಪ ||ಪರಿಪರಿಯ ಬಂಧುಧರ್ಮದಿನ್ ಅಹಂಮತಿ ಕರಗೆ |ಹರಡಿ ಹಬ್ಬುವುದಾತ್ಮ - ಮಂಕುತಿಮ್ಮ ||
ಬಾನಾಚೆಯಿಂ ವಿಶ್ವಸತ್ತ್ವ ತಾನಿಳಿದಿಳೆಗೆ |ನಾನೆನುವ ಚೇತನದಿ ರೂಪಗೊಂಡಿಹುದೋ? ||ನಾನೆನುವ ಕೇಂದ್ರದಿನೆ ಹೊರಟ ಸತ್ತ್ವದ ಪರಿಧಿ |ಬಾನಾಚೆ ಹಬ್ಬಿಹುದೊ? - ಮಂಕುತಿಮ್ಮ ||