ಕಗ್ಗ ಸಂಚಯ alpha
  • ಡಿ.ವಿ.ಜಿ
  • ಕಗ್ಗ
  • ಸಂಶೋಧನೆ
  • ಪದಕೋಶ
  • ಸಂಪರ್ಕಿಸಿ
  • ನಮ್ಮ ಬಗ್ಗೆ
ಇದರಂತೆ : ಇದನ್ನು :

ಒಟ್ಟು 4 ಕಡೆಗಳಲ್ಲಿ , 1 ವಚನಕಾರರು , 4 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತಿಳಿವಾವುದಿಳೆಗೆ ಯುಗಯುಗದ ಬೆಳಕಾಗಿತ್ತೊ |ಹಳದೆಂದು ನೀನದನು ಕಳೆಯುವೆಯ; ಮರುಳೆ? ||ತಳಹದಿಯದಲ್ತೆ ನಮ್ಮೆಲ್ಲ ಹೊಸ ತಿಳಿವಿಂಗೆ? |ಹಳೆ ಬೇರು ಹೊಸ ತಳಿರು - ಮಂಕುತಿಮ್ಮ ||
--------------
ಡಾ. ಡಿ.ವಿ.ಗುಂಡಪ್ಪ

ಬೀಳುವುದ ನಿಲ್ಲಿಪುದು; ಬಿದ್ದುದನು ಕಟ್ಟುವುದು |ಹಾಲೊಡೆಯೆ ಕಡೆದದನು ತಕ್ರವಾಗಿಪುದು ||ಹಾಳ ಹಾಳಾಗಿಪುದು; ಹಳದ ಹೊಸತಾಗಿಪುದು |ಬಾಳಿಗಿದೆ ಚಿರಧರ್ಮ - ಮಂಕುತಿಮ್ಮ ||

ಹಳೆ ಸೂರ್ಯ ಹಳೆ ಚಂದ್ರ ಹಳೆ ಭೂಮಿ ಹಳೆ ನೀರು |ಹಳೆ ಹಿಮಾಚಲ ಗಂಗೆ ಹಳೆ ವಂಶಚರಿತೆ ||ಹಳೆಯವಿವು ನೀನಿದರೊಳಾವುದನು ಕಳೆದೀಯೊ? |ಹಳದು ಹೊಸತರೊಳಿರದೆ? - ಮಂಕುತಿಮ್ಮ ||

ಹೊಸಹೊಸದು ತಾನಾಗುತಿರ್ದೊಡಂ ತನ್ನಯ |ಪ್ರಸವ ಪ್ರವಾಹ ಭೂಮಿಗಳ ಹಳೆತನದಿಂ ||ನಸುಸೋಂಕು ವಾಸನೆಯ ಪೊನಲೊಂದಬೇಕಲ್ತೆ? |ಹೊಸದು ಹಳದಾಗದೇ - ಮಂಕುತಿಮ್ಮ ||

©2014 - 2020 ಕನ್ನಡ ಸಂಚಯ | ಸಾಹಿತ್ಯ ಸಂಶೋಧನೆ ಹಾಗೂ ಅಧ್ಯಯನ ವೇದಿಕೆ