ಕಗ್ಗ ಸಂಚಯ alpha
  • ಡಿ.ವಿ.ಜಿ
  • ಕಗ್ಗ
  • ಸಂಶೋಧನೆ
  • ಪದಕೋಶ
  • ಸಂಪರ್ಕಿಸಿ
  • ನಮ್ಮ ಬಗ್ಗೆ
ಇದರಂತೆ : ಇದನ್ನು :

ಒಟ್ಟು 6 ಕಡೆಗಳಲ್ಲಿ , 1 ವಚನಕಾರರು , 4 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಲುಹಳೆಯ ಲೋಕವಿದು; ಬಲುಪುರಾತನಲೋಕ |ಬೆಳೆದಿರ್ಪುದಿದು ಕೋಟಿರಸಗಳನು ಪೀರ್ದು ||ಸುಲಭವಲ್ಲಿದರ ಸ್ವಭಾವವನು ಮಾರ್ಪಡಿಸೆ |ಸಲದಾತುರತೆಯದಕೆ - ಮಂಕುತಿಮ್ಮ ||
--------------
ಡಾ. ಡಿ.ವಿ.ಗುಂಡಪ್ಪ

ಹಳೆ ಸೂರ್ಯ ಹಳೆ ಚಂದ್ರ ಹಳೆ ಭೂಮಿ ಹಳೆ ನೀರು |ಹಳೆ ಹಿಮಾಚಲ ಗಂಗೆ ಹಳೆ ವಂಶಚರಿತೆ ||ಹಳೆಯವಿವು ನೀನಿದರೊಳಾವುದನು ಕಳೆದೀಯೊ? |ಹಳದು ಹೊಸತರೊಳಿರದೆ? - ಮಂಕುತಿಮ್ಮ ||

ಹಳೆಯ ಭಕ್ತಿಶ್ರದ್ಧೆಯಳಿಸಿಹೋಗಿವೆ ಮಾಸಿ |ಸುಳಿದಿಲ್ಲವಾವ ಹೊಸ ದರ್ಶನದ ಹೊಳಪುಂ ||ಪಳಗಿದ್ದ ಮನೆ ಬಿದ್ದ ಕುಂಟ ಕುರುಡನ ತೆರದಿ |ತಳಮಳಿಸುತಿದೆ ಲೋಕ - ಮಂಕುತಿಮ್ಮ ||

ಹಳೆಯ ಮಲೆ ಹಳೆಯ ನೆಲವಾದೊಡೆಯುಮೊರತೆ ಮಳೆ |ಹೊಳೆನೀರನಾವಗಂ ಪೊಸದಾಗಿಸುವವೊಲ್ ||ಹಳೆಯ ಕರ್ಮವ ಹೊಸದು ಕೊಚ್ಚಿ ಪೌರುಷನದಿಯ |ಬೆಳೆಯಿಪುದು ನವತೆಯಲಿ - ಮಂಕುತಿಮ್ಮ ||

©2014 - 2020 ಕನ್ನಡ ಸಂಚಯ | ಸಾಹಿತ್ಯ ಸಂಶೋಧನೆ ಹಾಗೂ ಅಧ್ಯಯನ ವೇದಿಕೆ