ಕಗ್ಗ ಸಂಚಯ alpha
  • ಡಿ.ವಿ.ಜಿ
  • ಕಗ್ಗ
  • ಸಂಶೋಧನೆ
  • ಪದಕೋಶ
  • ಸಂಪರ್ಕಿಸಿ
  • ನಮ್ಮ ಬಗ್ಗೆ
ಇದರಂತೆ : ಇದನ್ನು :

ಒಟ್ಟು 5 ಕಡೆಗಳಲ್ಲಿ , 1 ವಚನಕಾರರು , 5 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅತಿಶಯದದೃಷ್ಟ ಹುಟ್ಟಿಂ ಮೃತೇಂದ್ರಿಯನದಲ? |ಇತರರೊಳು ವಿಷಪರೀಕ್ಷೆಗೆ ನಿಲುವರಾರು? ||ಮಿತಕುಕ್ಷಿ ಮಿತಭುಕ್ತ; ಮತ್ತಾರ್ ಜಿತೇಂದ್ರಿಯನು? |ಅತಿಚರ್ಚೆ ಸಲದಲ್ಲಿ - ಮಂಕುತಿಮ್ಮ ||
--------------
ಡಾ. ಡಿ.ವಿ.ಗುಂಡಪ್ಪ

ಇಳೆಯ ಬಿಟ್ಟಿನ್ನು ಮೆತ್ತಲುಮೈದದ ಪ್ರೇತ |ವಲೆಯಂತೆ ಲೋಕ ತಲ್ಲಣಿಸುತಿಹುದಿಂದು ||ಹಳೆಧರ್ಮ ಸತ್ತಿಹುದು ಹೊಸಧರ್ಮ ಹುಟ್ಟಿಲ್ಲ |ತಳಮಳಕೆ ಕಡೆಯೆಂದೊ? - ಮಂಕುತಿಮ್ಮ ||

ಜಗವೆನ್ನ ಮುದ್ದಿಸದದೇಕೆಂದು ಕೊರಗದಿರು |ಮಗುವು ಪೆತ್ತರ್ಗೆ ನೀಂ; ಲೋಕಕೆ ಸ್ಪರ್ಧಿ ||ಹೆಗಲಹೊರೆ ಹುಟ್ಟಿದರ್ಗೆಲ್ಲಮಿರುತಿರೆ; ನಿನ್ನ |ರಗಳೆಗಾರಿಗೆ ಬಿಡುವೊ? - ಮಂಕುತಿಮ್ಮ ||

ತೊಟ್ಟಿಲುಗಳೆಷ್ಟೊ ಮಸಣಗಳಷ್ಟು ಧರೆಯೊಳಗೆ |ತೊಟ್ಟಿಲಿಗೆ ಹಬ್ಬ ಮಸಣವು ತೇಗುತಿರಲು ||ಹುಟ್ಟಿದವರೆಲ್ಲ ಸಾಯದೆ ನಿಲ್ಲೆ; ಹೊಸತಾಗಿ |ಹುಟ್ಟುವರ್ಗೆಡೆಯೆಲ್ಲಿ? - ಮಂಕುತಿಮ್ಮ ||

ಹುಳು ಹುಟ್ಟಿ ಸಾಯುತಿರೆ; ನೆಲ ಸವೆದು ಕರಗುತಿರೆ |ಕಡಲೊಳೆತ್ತಲೊ ಹೊಸ ದ್ವೀಪವೇಳುವುದು ||ಕಳೆಯುತೊಂದಿರಲಿಲ್ಲಿ; ಬೆಳೆವುದಿನ್ನೊಂದೆಲ್ಲೊ |ಅಳಿವಿಲ್ಲ ವಿಶ್ವಕ್ಕೆ - ಮಂಕುತಿಮ್ಮ ||

©2014 - 2020 ಕನ್ನಡ ಸಂಚಯ | ಸಾಹಿತ್ಯ ಸಂಶೋಧನೆ ಹಾಗೂ ಅಧ್ಯಯನ ವೇದಿಕೆ