ಕಗ್ಗ ಸಂಚಯ alpha
  • ಡಿ.ವಿ.ಜಿ
  • ಕಗ್ಗ
  • ಸಂಶೋಧನೆ
  • ಪದಕೋಶ
  • ಸಂಪರ್ಕಿಸಿ
  • ನಮ್ಮ ಬಗ್ಗೆ
ಇದರಂತೆ : ಇದನ್ನು :

ಒಟ್ಟು 7 ಕಡೆಗಳಲ್ಲಿ , 1 ವಚನಕಾರರು , 7 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏಳಿಸುವುದೊಂದು ಹೊರಸುಳಿವೆನ್ನ ಹೃದಯದಲಿ |ಗಾಳಿಸುಂಟರೆಯನದು ಹರಣಗಳ ಕುಲುಕಿ ||ಬಾಳನಲ್ಲಾಡಿಪುದು ಬೇರಿಂದ ತುದಿವರೆಗೆ |ಧೂಳದರೊಳೀ ಜನ್ಮ - ಮಂಕುತಿಮ್ಮ ||
--------------
ಡಾ. ಡಿ.ವಿ.ಗುಂಡಪ್ಪ

ಕೋಟಿ ದೆಸೆಯುಸಿರುಗಳು; ಕೋಟಿ ರಸದಾವಿಗಳು |ಕೋಟಿ ಹೃದಯದ ಹೋಹೊ ಹಾಹಕಾರಗಳು ||ಕೂಟ ಕೂಡಿಹುವಂತರಿಕ್ಷದಲಿ ನೀನದರಿನ್ |ಓಟವೋಡುವುದೆತ್ತ? - ಮಂಕುತಿಮ್ಮ ||

ಜನ್ಮ ಸಾವಿರ ಬರಲಿ; ನಷ್ಟವದರಿಂದೇನು? |ಕರ್ಮ ಸಾವಿರವಿರಲಿ; ಕಷ್ಟ ನಿನಗೇನು? ||ಬ್ರಹ್ಮ ಹೃದಯದಿ ನಿಲ್ಲೆ ಮಾಯೆಯೇಂಗೈದೊಡೇಂ? |ಇಮ್ಮಿದಳ ಸರಸವದು - ಮಂಕುತಿಮ್ಮ ||

ಪಂಡಿತರೆ ಶಾಸ್ತ್ರಿಗಳೆ ಮಿಥ್ಯೆಯಿಂ ತಥ್ಯಕ್ಕೆ |ಖಂಡಿತದಿ ಸೇತುವೆಯ ಕಟ್ಟುವೊಡೆ ನೀವು ||ಕಂಡಿಹಿರ ನರಹೃದಯದಾಳ ಸುಳಿ ಬಿರುಬುಗಳ? |ದಂಡವದನುಳಿದ ನುಡಿ - ಮಂಕುತಿಮ್ಮ ||

ಪದರಪದರಗಳಿಹುವು ಗಂಟುಗಂಟುಗಳಿಹುವು |ಹೃದಯದಲಿ ಬುದ್ಧಿಯಲಿ ವಾಕ್ಚರ್ಯೆಗಳಲಿ ||ಇದಮಿತ್ಥಮೆಲ್ಲಿಹುದು ಮನುಜಸ್ವಭಾವದಲಿ? |ವಿಧಿಯ ಕೈಚಿತ್ರವದು - ಮಂಕುತಿಮ್ಮ ||

ಹುದುಗಿಹುದದೆಲ್ಲಿ ಪರಮಾತ್ಮನೀ ತನುವಿನಲಿ? |ಹೃದಯದೊಳೊ ಮೆದುಳಿನೊಳೊ ಹುಬ್ಬಿನಿರುಕಿನೊಳೋ? ||ಇದನೆನಿತೊ ತರ್ಕಿಸಿಹರ್; ಎನ್ನೆಣಿಕೆಯನು ಕೇಳು |ಉದರವಾತ್ಮನಿವಾಸ - ಮಂಕುತಿಮ್ಮ ||

ಹೃದಯದಬ್ಬರವೇನು ಹೊಟ್ಟೆಯುಬ್ಬರದಂತೆ |ಅದರಿಳಿತ ಕೊರಳ ನಾಳದ ಸದ್ದಿನಿಂದ ||ಅದೆ ನಗುವು ದುಗುಡಗಳು; ಅದೆ ಹೊಗಳು ತೆಗಳುಗಳು |ಅದನಿಳಿಸೆ ಶಾಂತಿಯೆಲೊ - ಮಂಕುತಿಮ್ಮ ||

©2014 - 2020 ಕನ್ನಡ ಸಂಚಯ | ಸಾಹಿತ್ಯ ಸಂಶೋಧನೆ ಹಾಗೂ ಅಧ್ಯಯನ ವೇದಿಕೆ