ಒಟ್ಟು 4 ಕಡೆಗಳಲ್ಲಿ , 1 ವಚನಕಾರರು , 4 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಅರಸಡವಿಗೈದಿದೊಡಮ್; ಅವನಿತ್ತ ಪಾದುಕೆಗ- |ಳೊರೆಯದೊಡಮೆನನಂ; ತಾಂ ವರದಿಯೊರೆದು ||ದೊರೆತನದ ಭಾರವನು ಹೊತ್ತು ದೊರೆಯಾಗದಾ |ಭರತನವೊಲಿರು ನೀನು - ಮಂಕುತಿಮ್ಮ ||
ತನ್ನ ಶಿಲುಬೆಯ ತಾನೆ ಹೊತ್ತನಲ ಗುರು ಯೇಸು? |ನಿನ್ನ ಕರ್ಮದ ಹೊರೆಯ ಬಿಡದೆ ನೀನೆ ಹೊರು ||ಖಿನ್ನನಾಗದೆ ತುಟಿಯ ಬಿಗಿದು ಶವಭಾರವನು |ಬೆನ್ನಿನಲಿ ಹೊತ್ತು ನಡೆ - ಮಂಕುತಿಮ್ಮ ||
ನಿನ್ನ ಹೆಣವನು ನೀನೆ ಹೊತ್ತು ಸಾಗಿಸಬೇಕೊ! |ಅಣ್ಣ ಬಾ ತಮ್ಮ ಬಾ ಎಂದಳುವುದೇಕೋ? ||ನಿನ್ನೊಡಲೆ ಚಿತೆ; ಜಗದ ತಂಟೆಗಳೆ ಸವುದೆಯುರಿ |ಮಣ್ಣೆ ತರ್ಪಣ ನಿನಗೆ - ಮಂಕುತಿಮ್ಮ ||
ಹೊತ್ತು ಕಣಕಣದಿ ಮಣ್ಣನು ಗೆದ್ದಲಿರುವೆಗಳು |ಮೆತ್ತುತೆಡೆಬಿಡದೆ ದುಡಿದಾಗಿಸಿದ ಗೂಡು ||ಹುತ್ತವಾಗುವುದು ವಿಷಸರ್ಪಕ್ಕೆ; ಮಾನವನ |ಯತ್ನಗಳ ಕಥೆಯಿಷ್ಟೆ - ಮಂಕುತಿಮ್ಮ ||