ಒಟ್ಟು 4 ಕಡೆಗಳಲ್ಲಿ , 1 ವಚನಕಾರರು , 4 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಇಂತು ಹೊರಗೊಳಗುಗಳು ಬೇರೆಲೋಕಗಳಲ್ಲ |ಅಂತರಂಗದೊಳೂರಸಂತೆ ಸದ್ದಿಹುದು ||ಸಂತೆಯೊಳಮಂತರಂಗದ ಸದ್ದು ಕೇಳಿಪುದು |ಸ್ವಾಂತದಿಕ್ಕೆಲಗಳವು - ಮಂಕುತಿಮ್ಮ ||
ನೆರಳನಿನಿತನು ಕೊಡುವ; ದಣಿವನಿನಿತನು ಕಳೆವ |ತಿರೆಯ ಪಯಣದ ಹೊರೆಯನಿನಿತು ಸುಳುವೆನಿಪಾ ||ತರುವಾಗಿ ಮನೆಯೊಳಗೊ ಹೊರಗೊ ನೀಂ ಬೆಳೆಯುತಿರೆ |ಪರಮಧರ್ಮವದೆಲವೊ - ಮಂಕುತಿಮ್ಮ ||
ಬೀಸಿದಲ್ಲದೆ ಬೂದಿಕವಿದ ಕಿಡಿಯುರಿದೀತೆ |ಕೈಸೋಕದಿರೆ ಕೈಯ ಸಪ್ಪುಳಾದೀತೆ? ||ವಾಸನೆಯೆ ಮಾತೆಯಾಶೆಗೆ ಪಿತನು ಸಂದರ್ಭ |ದೋಷವೊಳಗೋ ಹೊರಗೊ? - ಮಂಕುತಿಮ್ಮ ||
ಶರಧಿಯೊಳಗಣ ವಸ್ತುಗಳನಲಚಿ ಜಾಲಿಸುವ |ತೆರೆಯಂತೆ ವಿಶ್ವಸತ್ತ್ವದ ಲಹರಿ ನಮ್ಮ ||ಹೊರಗೊಳಗುಗಳಲಿ ಸಂತತ ನೆರೆದು ಹರಿಯುತ್ತ |ಭರಿಸುತಿರುವುದು ಬಾಳ - ಮಂಕುತಿಮ್ಮ ||