ಪ್ರಾರಂಭ ಪದದ ಹುಡುಕು
ಶ್ರೀಯನಾಯುವ ಬಲವ ಜಯವ ಬೇಡಿರ್ದೊಡಂ |ಗಾಯತ್ರಿಯನೆ ಪರಮಮಂತ್ರವೆಂದಾರ್ಯರ್ |ಧೀಯಂ ಪ್ರಚೋದಿಸೆಂದನುದಿನದಿ ಬೇಡಿದರು |ಶ್ರೇಯಸ್ಸು ಧೀಮಹಿಮೆ - ಮಂಕುತಿಮ್ಮ ||
ಶ್ರೀವಿಷ್ಣು ವಿಶ್ವಾದಿಮೂಲ ಮಾಯಾಲೋಲ |ದೇವ ಸರ್ವೇಶ ಪರಬೊಮ್ಮನೆಂದು ಜನಂ ||ಆವುದನು ಕಾಣದೊಡಮಳ್ತಿಯಿಂ ನಂಬಿಹುದೊ |ಆ ವಿಚಿತ್ರಕೆ ನಮಿಸೊ - ಮಂಕುತಿಮ್ಮ ||
ಶ್ರುತಿಯರ್ಥ ವಿಶದವಪ್ಪುದು ಪುರುಷಭಾಷ್ಯದಿಂ |ಶ್ರುತಿಮತಿಗಳನ್ಯೋನ್ಯಪರಿಪೂರಕಂಗಳ್ ||ಯುತಿಯೊಳವು ಸೇರಿರಲು ಸತ್ಯದರ್ಶನ ನಿನಗೆ |ಕೃತಸಮನ್ವಯನಾಗು - ಮಂಕುತಿಮ್ಮ ||
ಶ್ವಸನನಾಗಸದಿನಿಳಿದದ್ರಿಗುಹೆಗಳೊಳಲೆಯು |ತುಸಿರಾಗಿ ನಮ್ಮೊಳಾವಗಮಾಡುವಂತೆ ||ವಿಸರಸತ್ತ್ವಮದೊಂದದೆತ್ತಣಿನೊ ಬಂದು ನ |ಮ್ಮಸುಗಳೊಳವೊಗುತಿಹುದು - ಮಂಕುತಿಮ್ಮ ||
ಶ್ವಾನ ತಿಪ್ಪೆಯ ಮೇಲೆ ಮಲಗಿರಲು ಪೂರ್ವಿಕ- |ಜ್ಞಾನ ಪಶ್ಚಾತ್ತಾಪ ಶುಭಚಿಂತೆಯಂತೆ ||ಏನೊ ವಾಸನೆ ಬೀಸಲದು ಹಾರಿ ದುಮುಕುವುದು |ಮಾನವನ ಮನಸಂತು - ಮಂಕುತಿಮ್ಮ ||